Karnataka NewsLatestPolitics

*ಬಿಜೆಪಿ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ: ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*

ಪ್ರಗತಿವಾಹಿನಿ ಸುದ್ದಿ: “ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದರು.

ಮುಖ್ಯಮಂತ್ರಿಗಳು ನಿಮಗೆ ಆಹ್ವಾನ ನೀಡದೆ ಶಾಸಕರ ಸಭೆ ಮಾಡುತ್ತಿದ್ದಾರೆ ಎಂದು ಕೇಳಿದಾಗ “ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ” ಎಂದು ಮರುಪ್ರಶ್ನಿಸಿದರು.

ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ” ಎಂದರು.

Home add -Advt

ಬಿಜೆಪಿ ತನ್ನ ಮನೆ ಸರಿಪಡಿಸಿಕೊಳ್ಳಲಿ:

ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ” ಎಂದರು.

ಬೆಂಗಳೂರು ಹಾಗೂ ನಾಗರೀಕರ ಹಿತಕ್ಕಾಗಿ ಪಾಲಿಕೆ ವಿಭಜನೆ:

“ನಾವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಈ ವಿಚಾರವಾಗಿ ವಿರೋಧ ಪಕ್ಷಗಳ ನಾಯಕರ ಅಭಿಪ್ರಾಯವನ್ನು ಪಡೆದಿದ್ದೇವೆ. ಪಾಲಿಕೆ ಚುನಾವಣೆ ಕುರಿತಾಗಿ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಬೇಕಾಗಿದೆ. ಬೆಂಗಳೂರು ಹಾಗೂ ನಾಗರೀಕರ ಹಿತಕ್ಕಾಗಿ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ. ನಾವು ಭೌಗೋಳಿಕ ಹಾಗೂ ಆಡಳಿತ, ಆರ್ಥಿಕತೆ ಹಾಗೂ ಭವಿಷ್ಯದಲ್ಲಿ ಬೆಂಗಳೂರಿನ ವಿಸ್ತರಣೆ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಮಾಡಿದ್ದೇವೆ. ಬಿಜೆಪಿಯವರು ರಾಜಕೀಯ ಕಾರಣಗಳಿಗೆ ನಮ್ಮನ್ನು ಟೀಕೆ ಮಾಡುತ್ತಾರೆ, ಮಾಡಲಿ. ಸಾರ್ವಜನಿಕವಾಗಿ ಟೀಕೆ ಮಾಡುತ್ತಾರೆ, ಮಾಡಲಿ. ನಾವು ಇಡೀ ಬೆಂಗಳೂರು ಹಾಗೂ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾವನೆ ಹೇಳಿರುವುದರಲ್ಲಿ ತಪ್ಪೇನಿದೆ:

ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ತಪ್ಪೇನಿದೆ. ಹಿರಿಯ ನಾಯಕರು ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಭಾವನೆಗಳನ್ನು ಹೇಳಿಕೊಂಡಿದ್ದಾರೆ. ಇದರಲ್ಲಿ ಯಾವ ತರಹದ್ದು ತಪ್ಪೇನಿಲ್ಲ” ಎಂದರು.

ರಾಜ್ಯ ರಾಜಕಾರಣಕ್ಕೆ ಖರ್ಗೆ ಅವರು ಮರಳಿ ಬರುತ್ತಾರೆ ಎನ್ನುವ ಕೆಲವರ ಚರ್ಚೆ ಬಗ್ಗೆ ಕೇಳಿದಾಗ, “ಈ ಬಗ್ಗೆಯೂ ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ. ಅವರವರ ಅಭಿಪ್ರಾಯ ಅವರು ತಿಳಿಸುತ್ತಾರೆ” ಎಂದರು.

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ

ಬಿಜೆಪಿಯವರು ಯೂರಿಯ ಕೊರತೆ ಬಗ್ಗೆ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ, “ಬಿಜೆಪಿ ಅವರ ಮೇಲೆ ಅವರೇ ಪ್ರತಿಭಟನೆ ಮಾಡಿಕೊಳ್ಳಬೇಕು ಅಷ್ಟೇ. ಈ ಹಿಂದೆ ಗೊಬ್ಬರ ಕೊಡಲು ಆಗದೇ ರೈತರ ಮೇಲೆ ಗುಂಡು ಹಾರಿಸಿದ್ದರು. ನಾವು ಅಂತಹ ಕೆಲಸ ಮಾಡುವುದಿಲ್ಲ. ಮಳೆ ಹೆಚ್ಚಾಗಿರುವ ಕಾರಣ ಕೃಷಿ ಚಟುವಟಿಕೆ ಜಾಸ್ತಿಯಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಸಂಸದರು ಒಪ್ಪಿಕೊಂಡಿದ್ದಾರೆ. ಕೂಡಲೇ ಗೊಬ್ಬರ ಸಿಕ್ಕರೆ ನಮ್ಮ ರೈತರಿಗೆ ಒಳ್ಳೆಯದಾಗುತ್ತದೆ ಎಂದು ನಾವು ಒತ್ತಡ ಹಾಕುತ್ತಿದ್ದೇವೆ” ಎಂದರು.

“ಬಿಜೆಪಿ ಅವರ ಕೇಂದ್ರ ಕೃಷಿ ಸಚಿವರು, ರಾಸಾಯನಿಕ ಗೊಬ್ಬರ ಖಾತೆ ಸಚಿವರ ವಿರುದ್ಧ ಪ್ರತಿಭಟನೆ ಮಾಡಬೇಕಷ್ಟೆ. ನಮ್ಮ ಮೇಲೆ ಏಕೆ ಪ್ರತಿಭಟನೆ ಮಾಡುತ್ತಾರೆ. ಗೊಬ್ಬರವೇನು ನಮ್ಮ ಬಳಿ ಇದೆಯೇ? ಆ ಇಲಾಖೆ, ಗೊಬ್ಬರದ ಕಾರ್ಖಾನೆ ಏನು ನಮ್ಮ ಬಳಿ ಇದೆಯೇ? ಅವರು ಕೊಡುವುದನ್ನು ಹಂಚುವುದು ನಮ್ಮ ಕೆಲಸವಷ್ಟೇ” ಎಂದು ಹೇಳಿದರು.

“ನಾವು ಹಂಚುವುದರಲ್ಲಿ ತಾರತಮ್ಯ ಮಾಡಿದರೆ ಮಾತನಾಡಲಿ. ನಮ್ಮ ಬಳಿ ಎಲ್ಲ ಲೆಕ್ಕವೂ ಇದೆ. ಯಾವ ಯಾವ ಸೊಸೈಟಿಗಳಿಗೆ ಎಷ್ಟು ಹಂಚಲಾಗಿದೆ, ಯಾವ ಜಿಲ್ಲೆಯಲ್ಲಿ ಎಷ್ಟು ದಾಸ್ತಾನಿದೆ ಎನ್ನುವ ಎಲ್ಲ ಲೆಕ್ಕವೂ ಇದೆ. ಇದನ್ನು ಪರಿಶೀಲನೆ ನಡೆಸಲಿ, ಅದನ್ನು ಎಲ್ಲರೂ ನೋಡಲಿ. ನಾವುಗಳು ಯಾರೂ ರೈತರ ವಿರುದ್ಧ ಹೋಗಿಲ್ಲ, ಆ ಕೆಲಸ ಮಾಡುವುದೂ ಇಲ್ಲ” ಎಂದು ತಿಳಿಸಿದರು.

CM calling a legislators’ meeting is well within his powers, nothing wrong with it: DCM DK Shivakumar
Let BJP set its own house in order

Deputy Chief Minister DK Shivakumar today said there was nothing wrong with the legislators’ meeting called by Chief Minister Siddaramaiah.

Speaking to reporters at his Sadashivanagar residence, he said, “Calling a legislators’ meeting is well within the power of the CM. What is wrong with it? AICC General Secretary Surjewala, who had held meetings with MLAs, has given his feedback to the CM. The legislators’ meeting is regarding that. I have no problem with the meeting, not sure why it is troubling the media.” He was replying to a query on CM holding legislators’ meeting without inviting the DCM.

Asked why he was not invited for the meet, he said, “I have no issues with the meeting. I will hold a separate meeting with legislators concerned as we have a different agenda for Bengaluru city. I have also held discussions with many MLAs already.”

Let BJP set its house in order
Asked about BJP’s criticism that the CM has ignored the DCM, he said, “Let them set their house in order before commenting on other parties. There is factionalism in BJP and their leaders are up against each other publicly.”

GBA for greater good of Bengaluru
“The formation of Greater Bengaluru Authority is for the greater good of Bengaluru city. This decision has been taken keeping in mind the geographical, administrative and economic aspects. We have to submit an affidavit to the Supreme Court regarding the elections.”

Nothing wrong in Mallikarjun Kharge expressing his feelings
Asked about Mallikarjun Kharge expressing disappointment over missing out on becoming the CM of Karnataka, he said, “There is nothing wrong in it. He is a senior leader of the party and has worked hard for it. He has just expressed his feelings.”

Replying to a question on the possibility of Kharge’s return to state politics, he said, “There is nothing wrong in a debate like that. Everyone’s is entitled to his opinion.”

Protests against fertilizer shortage
Replying to a question on BJP’s protests against fertilizer shortage in the state, he said, “BJP has to protest against itself. It was the BJP which had fired against farmers demanding fertilizers, we don’t do things like that. There is increased demand for fertilizers in view of good rainfall in the state and hence there is shortage. The MPs have agreed that the Centre has to supply more and we are also putting pressure on the Centre. Fertilizer production is controlled by the Centre. We are only in charge of distributing it and we are doing it efficiently. The BJP has to protest against their own Union Agriculture minister.”

Related Articles

Back to top button