
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂದಿನ ಇನ್ನೂ 3-4 ದಿನ ಬಹುತೇಕ ಕಡೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದಿನಿಂದ ಆಗಸ್ಟ್ 3ರ ವರೆಗೂ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯಲಿದ್ದು ಸಾಕಷ್ಟು ಅವಾಂತರ ಸೃಷ್ಟಿಸಲಿದ್ದಾನೆ ಎನ್ನಲಾಗಿದೆ.
ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ರಾಮನಗರ, ಶಿವಮೊಗ್ಗ ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಮತ್ತೊಂದೆಡೆ, ಸಿಲಿಕಾನ್ ಸಿಟಿ ಬೆಂಗಳೂರಲ್ಲೂ ಮಳೆ ಆಗುವ ಮುನ್ಸೂಚನೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ.