
ಪ್ರಗತಿವಾಹಿನಿ ಸುದ್ದಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿ ಮಾಡಿ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಆಯೋಗ ಸಿದ್ಧತೆ ನಡೆಸಿದೆ.