*BREAKING: ಅತ್ಯಾಚಾರ: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ದೋಷಿ ಎಂದು ತೀರ್ಪು ನೀಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದೆ.
ಪ್ರಜ್ವಲ್ ರೇವಣ್ಣ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಲಯ, ಆರೋಪಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಕೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಇದೇ ವೇಳೆ ನ್ಯಾಯಾಲಯ, ಶಿಕ್ಷೆ ಪ್ರಮಾಣವನ್ನು ನಾಳೆಗೆ ಪ್ರಕಟಿಸುವುದಾಗಿ ತಿಳಿಸಿದೆ.
ಕೆ.ಆರ್.ನಗರದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.
ಮನೆ ಕೆಲಸಕ್ಕೆಂದು ನೇಮಕಗೊಂಡಿದ್ದ ಮಹಿಳೆ ಮೇಲೆ ಹೊಳೆನರಸೀಪುರ ಫಾರ್ಮ್ ಹೌಸ್ ನಲ್ಲಿ ಹಾಗೂ ಬೆಂಗಳೂರಿನ ನಿವಾಸದಲ್ಲಿ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿ, ಖಾಸಗಿ ವಿಡಿಯೋ ಮಾಡಿ ಬೆದರಿಕೆಯೊಡ್ಡಿದ್ದ. ಘಟನೆ ಬಳಿಕ ಮಹಿಳೆ ಕೆಲಸ ಬಿಟ್ಟು ಊರಿಗೆ ತೆರಳಿದ್ದರು. ಪ್ರಕರಣದ SIT ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ್ದ ಬಗ್ಗೆ ಬಟ್ಟೆ ಮೇಲಿನ ಕಲೆ ಸೇರಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಾಗಿದ್ದವು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿರುದ್ಧ ಆರೋಪ ಸಾಬೀತಾಗಿತ್ತು. ಇದೀಗ ಅದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದ್ದು, ನಾಳೆ ಶಿಕ್ಷೆ ಪ್ರಮಾಣ ಏನಿರಲಿದೆ ಎಂಬುದನ್ನು ಕಾದುನೋಡಬೇಕಿದೆ.