Film & EntertainmentKarnataka News

*ಡಾ.ರಾಜ್‌ಕುಮಾ‌ರ್ ಸಹೋದರಿ ನಾಗಮ್ಮ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ನಟ ಸಾರ್ವಭೌಮ ಡಾ.ರಾಜ್‌ಕುಮಾ‌ರ್ ಅವರ ಸಹೋದರಿ ನಾಗಮ್ಮ ಅವರು ಇಂದು (ಆ.1) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ ರಾಜ್‌ಕುಮಾ‌ರ್ ಸಹೋದರಿ ನಾಗಮ್ಮ ಗಾಜನೂರಿನ ಮನೆಯಲ್ಲೇ ಮೃತಪಟ್ಟಿದ್ದಾರೆ.

ನಾಗಮ್ಮ ಅವರಿಗೆ 92 ವರ್ಷ ವಯಸ್ಸಾಗಿತ್ತು. ಪುನೀತ್‌ ರಾಜ್‌ಕುಮಾ‌ರ್ ಅಗಲಿ 4 ವರ್ಷಗಳೇ ಕಳೆದು ಹೋಗಿವೆ. ಆದ್ರೆ ಈ ವಿಚಾರ ನಾಗಮ್ಮ ಅವರಿಗೆ ಗೊತ್ತಿರಲಿಲ್ಲ. ಆದರೆ, ಅತ್ತೆ ನಾಗಮ್ಮ ಆಗಾಗ ಅಪ್ಪು ಕಂದ ಬಂದು ನನ್ ನೋಡ್ಕೊಂಡು ಹೋಗು ಅಂತ ಹೇಳ್ತಾನೇ ಇರುತ್ತಿದ್ದರಂತೆ. ಇಂದು ರಾಜ್ ಕುಮಾ‌ರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆ ಇಹಲೋಕ ತ್ಯಜಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button