Kannada NewsKarnataka NewsLatest
*ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ: ಕಮಿಷನರ್ ಎಚ್ಚರಿಕೆ*

ಇಬ್ಬರ ಬಂಧನ
ಪ್ರಗತಿವಾಹಿನಿ ಸುದ್ದಿ: ಅಸಭ್ಯವಾಗಿ ಕಮೆಂಟ್ ಮಾಡುವವರು, ಅವಾಚ್ಯ ಶಬ್ದಗಳನ್ನು ಬಳುವವರಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಕಮೆಂಟ್ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಅರೆಸ್ಟ್ ಮಾಡುತ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗುವುದು. ಅಸಭ್ಯವಾಗಿ ಕಮೆಂಟ್ ಮಾಡುವವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸುತ್ತೇವೆ ಎಂದು ಹೇಳಿದರು.
ಇನ್ನು ಜಾಲತಾಣಗಳಲ್ಲಿ ನಟಿ ರಮ್ಯಾ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು 13 ಜನರ ಮಾಹಿತಿ ಸಂಗ್ರಹಿಸಿದ್ದಾರೆ. ಸದ್ಯ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರು ತಮ್ಮ ಜಾಲತಾಣಗಳ ಖಾತೆ ಮೂಲಕ ಕಮೆಂಟ್ ಕಳುಹಿಸುತ್ತಿದ್ದರು ಎಂದು ತಿಳಿಸಿದರು.