Belagavi NewsBelgaum NewsKannada NewsKarnataka News
*ಬೆಳಗಾವಿ: ಹೆರಾಯಿನ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಹಾದ್ವಾರ ರೋಡ್ ಸಂಭಾಜಿ ಗಲ್ಲಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಎಂಬ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಾದ ವೈಭವ ಪ್ರಕಾಶ ಕುರಣಿ (21), ಓಂಕಾರ ಚಂದ್ರಶೇಖರ ಜೋಶಿ (19) ಎಂಬಾತರನ್ನು ಬಂಧಸಿ, 18,000 ರೂ. ಮೌಲ್ಯದ 24.87 ಗ್ರಾಂ ಹೆರಾಯಿನ್ ವಶಪಡಿಸಿಕೊಂಡು ಆರೋಪಿತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ.152/2025 ಕಲಂ.21(b)ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಲಾಗಿದೆ.