Kannada NewsKarnataka NewsNationalPolitics
*ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರ ಹತ್ತಿಕ್ಕಲು ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ರಜೆಯನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನಾಳೆಯಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೌಕರರ ರಜೆ ರದ್ದು ಮಾಡಿದ ಸಾರಿಗೆ ಇಲಾಖೆ ಮುಷ್ಕರದಲ್ಲಿ ಭಾಗಿ ಆದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಾತ್ರವಲ್ಲದೇ ಕೆಲಸ ಮಾಡಿಲ್ಲ ಎಂದಾದರೆ ಸಂಬಳವನ್ನೂ ನೀಡಲ್ಲ ಎಂದು ಇಲಾಖೆ ವಾರ್ನಿಂಗ್ ಮಾಡಿದೆ.
ಇಂದು ಮಧ್ಯರಾತ್ರಿಯಿಂದಲೇ ಸಾರಿಗೆ ನೌಕರರ ಮುಷ್ಕರ ಆರಂಭ ಆಗಬೇಕಿತ್ತು. ಆದರೆ ನಾಳೆಯಿಂದ ಸಾರಿಗೆ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೇ ಅಗತ್ಯ ಬಿದ್ದರೆ ವಾರದ ರಜೆಯನ್ನೂ ರದ್ದು ಮಾಡಲು ಸೂಚಿಸಿದೆ.