
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ 19 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಬಾಗಲಕಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ದಾವಣಗೆರೆ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.