
ಪ್ರಗತಿವಾಹಿನಿ ಸುದ್ದಿ: ಸಿಆರ್ ಪಿಎಫ್ ಸಿಬ್ಬಂದಿ ತೆರಳುತ್ತಿದ್ದ ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಉಧಂಪುರ ಜಿಲ್ಲೆಯ ನಲ್ಹಾದಲ್ಲಿ ಈ ಘಟನೆ ನಡೆದಿದೆ. ಕಡ್ವಾ ಪ್ರದೇಶದಲ್ಲಿ ಬೆಳಿಗ್ಗೆ ಸುಮಾರು 10:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. 23 ಜನ ಸಿಆರ್ ಪಿ ಎಫ್ ಯೋಧರು ಬಸಂತ್ ಘರ್ ನಿಂದ ಮರಳುತ್ತಿದ್ದರು. ಅಪಘಾತದಲ್ಲಿ ಇಬ್ಬರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಯೋಧ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.