
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರಿಯ ನಾಯಕ, ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಸಂಸದರು ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ತುರ್ತು ಭೂಸ್ಪರ್ಷ ಮಾಡಿರುವ ಘಟನೆ ನಡೆದಿದೆ.
ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಚೆನ್ನೈನನಲ್ಲಿ ವಿಮಾನ ತುರ್ತು ಭೂಸ್ಪರ್ಷವಾಗಿದೆ. ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದಂತಾಗಿದೆ. ತಿರುವನಂತಪುರಂ ನಿಂದ ದೆಹಲಿಗೆ ಹೊರಟಿದ್ದ ವಿಮಾನ A12455ರಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ ಅಲ್ಲದೇ ಹವಾಮಾನ ವೈಪರೀತ್ಯವೂ ಆಗಿದ್ದರಿಂದ ತುರ್ತು ಭೂಸ್ಪರ್ಷ ಮಾಡಲಾಗಿದೆ.
ಈ ಬಗ್ಗೆ ಕೆ.ಸಿ ವೇಣುಗೋಪಾಲ್ ವಿಮಾನ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಾನು ಹಾಗೂ ಹಲವು ಸಂಸ್ದರು, ನೂರಾರು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾಗುವುದರಿಂದ ಸ್ವಲ್ಪದರಲ್ಲಿ ತಪ್ಪಿದೆ ಎಂದು ತಿಳಿಸಿದ್ದಾರೆ.
ತಡವಾಗಿ ಆರಂಭವಾದ ವಿಮಾನ ಪ್ರಯಾಣ ಕೆಲವೇ ಕ್ಷಣಗಳಲ್ಲಿ ಅಂತ್ಯಂತ ಭಯಾನಕ ಯಾನವಾಗಿ ಬದಲಾಯಿತು. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಟರ್ಭೋಲೈನ್ಸ್ ನಲ್ಲಿ ಸಮಸ್ಯೆ ಎದುರಾಯಿತು. ಅದಾದ ಒಂದುಗಂಟೆ ನಂತರ ವಿಮಾನದಲ್ಲಿ ಸಿಗ್ನಲ್ ತೊಂದರೆ ಇದೆ ಎಂದು ಕ್ಯಾಪ್ಟನ್ ಘೋಷಿಸಿದರು. ಬಳಿಕ ವಿಮಾನವನ್ನು ಚೆನ್ನೈ ಕಡೆಗ್ರೆ ತಿರುಗುಸಲಾಯಿತು. ತಾಂತ್ರಿಕ ಸಮಸ್ಯೆಯಾದರೂ ವಿಮಾನ ಸುಮಾರು ಎರಡು ಗಂಟೆಗಳ ಕಾಲ ವಿಮಾನ ನಿಲ್ದಾಣ ಸುತ್ತ ಹಾರಾಡಿದ ಬಳಿಕ ಲ್ಯಾಂಡಿಂಗ್ ಗೆ ಅನುಮತಿ ನೀಡಲಾಗಿದೆ. ಮೊದಲ ಲ್ಯಾಂಡಿಂಗ್ ಯತ್ನದ ವೇಳೆ ಅದೇ ರನ್ ವೇ ನಲ್ಲಿ ಮತ್ತೊಂದು ವಿಮಾನ ಇರುವುದು ತಿಳಿದು ಕೊನೇ ಕ್ಷಣದಲ್ಲಿ ಪೈಲಟ್ ಟೇಕ್ ಆಫ್ ಮಾಡಿ ನಮ್ಮನ್ನು ಬಚಾವ್ ಮಾಡಿದರು. ಎರಡನೇ ಯತ್ನದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಯಿತು ಎಂದು ಟ್ವೀಟ್ ಮೂಲಕ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.