Latest

ನವದೆಹಲಿ ಬೆಂಕಿ ಅವಘಡ, ಪ್ರಧಾನಿ ಸೇರಿ ಪ್ರಮುಖರಿಂದ ನೆರವು

ಪ್ರಗತಿವಾಹಿನಿ ಸುದ್ದಿ, ನವದೆಹಲಿ

ನವದೆಹಲಿ : ಅನಾಜ್ ಮಂಡಿ ಬೆಂಕಿ ಅವಘಡದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಸಹಾಯ ನಿಧಿಯಿಂದ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ ನೆರವು ಘೋಷಿಸಿದ್ದಾರೆ.

ಭಾನುವಾರ ಮುಂಜಾನೆ ರಾಣಿಜಾನ್ಸಿ ರಸ್ತೆಯ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ 43 ಜನರು ಸಾವನ್ನಪ್ಪಿದ್ದಾರೆ. 16 ಜನರ ಗಂಭೀರ ಗಾಯಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 62 ಜನರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಸಿಎಂ ಕೇಜ್ರಿವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ನಂತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿಮಾಡಿದರು. ಮೃತ ವ್ಯಕ್ತಿಯ ಕುಟುಂಬಗಳಿಗೆ 10 ಲಕ್ಷ ರೂ. ಮತ್ತು ಗಂಭೀರ ಗಾಯಗೊಂಡವರಿಗೆ ಲಕ್ಷ ರೂ ನೆರವು ಘೋಷಿಸಿದ್ದಾರೆ.ನವದೆಹಲಿ ಬೆಂಕಿ ಅವಘಡ, ಪ್ರಧಾನಿ ಸೇರಿ ಪ್ರಮುಖರಿಂದ ನೆರವು

ಬಿಜೆಪಿ ಮುಖಂಡ ಮನೋಜ್ ತಿವಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಬಿಜೆಪಿ ಪರವಾಗಿ, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಮತ್ತು ಅವಘಡದಲ್ಲಿ ಗಾಯಗೊಂಡವರಿಗೆ 25 ಸಾವಿರ ರೂ ನೆರವು ಪ್ರಕಟಿಸಿದ್ದಾರೆ.. ಅಲ್ಲದೆ ಪಕ್ಷದ ಪ್ರಮುಖ ಮುಖಂಡರು ಈ ಘಟನೆ ಬಗ್ಗೆ ಆಘಾತ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಬೆಂಕಿಯ ಕಾರಣ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಂದು ತಿಳಿದುಬಂದಿದ್ದು, ಘಟನೆಯ ಬಗ್ಗೆ ಕೇಜ್ರಿವಾಲ್ ತೀವ್ರ ತನಿಖೆಗೆ ಆದೇಶಿಸಿದ್ದಾರೆ. ದೆಹಲಿ ಅಪರಾಧ ಶಾಖೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button