Latest

*BREAKING: ಸಚಿವ ಕೆ.ಎನ್.ರಾಜಣ್ಣ ದಿಢೀರ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ದಿಢೀರ್ ರಾಜೀನಾಮೆ ನೀಡಿದ್ದಾರೆ.

Home add -Advt

ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ರಾಜಣ್ಣ ನಡೆ ತೀವ್ರ ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆ ವೇಳೆ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಮತಗಳ್ಳತನ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇದೇ ಸಂದರ್ಭದಲ್ಲಿ ಸಚಿವ ರಾಜಣ್ಣ, ಲೋಕಸಭಾ ಚುನಾವಣೆಯ ವೇಳೆ ನಾವೇ ಅಧಿಕಾರದಲ್ಲಿ ಇದ್ವಿ. ಮಹದೇವಪುರದಲ್ಲಿ ನಮ್ಮ ಲೋಪವಿದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಯೇ ರಾಜಣ್ಣಗೆ ಮುಳುವಾಗಿದೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯಗೆ ರಾಜಣ್ಣ ರಾಜೀನಾಮೆ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ

Related Articles

Back to top button