Karnataka NewsLatestPolitics

*ಸಚಿವ ಕೆ.ಎನ್.ರಾಜಣ್ಣ ಸಂಪುಟದಿಂದ ವಜಾ: ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಆದೇಶ*

ಪ್ರಗತಿವಾಹಿನಿ ಸುದ್ದಿ: ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಬದಲಾಗಿ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಅಧಿಕೃತ ಆದೇಶ ಪತ್ರ ರವಾನೆಯಾಗಿದೆ. ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯಿಂದ ಸರ್ಕಾರಕ್ಕೆ ಅಧಿಕೃತವಾಗಿ ಆದೇಶ ಪತ್ರ ಪ್ರಕಟಿಸಿದ್ದಾರೆ.

Related Articles

Back to top button