Belagavi NewsBelgaum NewsKannada NewsKarnataka NewsNational

*ನಾಳೆಯಿಂದ ಮುಂದಿನ ನಾಲ್ಕು ದಿನ ಮಳೆ ಪ್ರಮಾಣ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ನಾಳೆಯಿಂದ ರಾಜ್ಯದಲ್ಲಿ 4 ದಿನ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ರಾಜ್ಯದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಮಂಡ್ಯ ರಾಮನಗರ, ಕೊಡಗು, ಚಾಮರಾಜನಗರ, ಬೆಂಗಳೂರು, ಕೋಲಾರ, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್ 13ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. 

Home add -Advt

ಇನ್ನು ಆಗಸ್ಟ್ 14ರಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Back to top button