Karnataka NewsLatestPolitics

*ಪ್ರಧಾನಿಗೆ ಪ್ರತಿಮೆ: ಡಿಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಅಂದಿನ ಸಮಾರಂಭದಲ್ಲಿ ತಾವು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು. ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಆ. 10 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭ ನಡೆದದ್ದನ್ನು ಇಲ್ಲಿ ಸ್ಮರಿಸಬಹುದು.

Home add -Advt

Related Articles

Back to top button