
ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ 7 ಮಕ್ಕಳು ಸೇರಿ 10 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಜಸ್ಥಾನದ ದೌಸಾ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ದೇವಸ್ಥಾನದಿಂದ ವಾಪಸ್ ಆಗುತ್ತಿದ್ದಾಗ ಪಿಕಪ್ ವಾಹನ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ 7 ಮಕ್ಕಳು ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಮೃತರಲ್ಲಿ ಹೆಚ್ಚಿನವರು ಉತ್ತರ ಪ್ರದೇಶ ಮೂಲದ ಇಟವಾ ಜಿಲ್ಲೆಯವರೆಂದು ತಿಳಿದುಬಂದಿದೆ. ಗಾಯಾಳು 15 ಜನರಲ್ಲಿ 9 ಜನರನ್ನು ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.