
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ರನ್ನು ಬೆಂಗಳೂರು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ಆದೇಶ ಹೊರಡಿಸಿತ್ತು. ಅಲ್ಲದೇ ಎಲ್ಲಾ ಏಳು ಆರೋಪಿಗಳನ್ನು ತಕ್ಷಣ ವಶಕ್ಕೆ ಪಡೆಯಲು ಸೂಚನೆ ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ದರ್ಶನ್ ಗೆಳತಿ ಪವಿತ್ರಾಗೌಡ ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿತ್ತು.
ಕೋರ್ಟ್ ಆದೇಶ ಪ್ರಕಟವಾಗುತ್ತಿದ್ದಂತೆ ತಮಿಳುನಾದಿನಿಂದ ಬೆಂಗಳೂರಿಗೆ ಪತ್ನಿ ವಿಜಯಲಕ್ಷ್ಮೀ ನಿವಾಸಕ್ಕೆ ಆಗಮಿಸಿದ ನಟ ದರ್ಶನ್ ಅವರನ್ನು ಹೊಸಕೆರೆಹಳ್ಳಿ ಫ್ಲ್ಯಾಟ್ ನಲ್ಲಿ ಬಂಧಿಸಲಾಗಿದೆ.