Karnataka NewsLatestPolitics

*ಧರ್ಮಸ್ಥಳ ಪ್ರಕರಣದ ಸತ್ಯಾಂಶವನ್ನು ಗೃಹ ಸಚಿವರು ಸದನದಲ್ಲೇ ವಿವರಿಸುತ್ತಾರೆ: ಡಿಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: “ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದಾಗ, “ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅಲ್ಲಿನ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ಆತ್ಮವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ ಎಂಬ ವಿಶ್ವಾಸ ನನ್ನದು. ಈ ಪ್ರಕರಣದ ವಿಚಾರವಾಗಿ ನಮ್ಮ ಗೃಹ ಸಚಿವರು ಅಧಿವೇಶನದಲ್ಲಿ ಉತ್ತರ ನೀಡುವ ಮೂಲಕ ರಾಜ್ಯದ ಮುಂದೆ ಸತ್ಯಾಂಶ ಇಡಲಿದ್ದಾರೆ” ಎಂದು ತಿಳಿಸಿದರು.

ಇಲ್ಲಿ ಷಡ್ಯಂತ್ರ ನಡೆದಿದೆಯೇ ಎಂದು ಕೇಳಿದಾಗ, “ಈ ವಿಚಾರವನ್ನು ಗೃಹ ಸಚಿವರೇ ವಿವರಿಸಲಿದ್ದಾರೆ. ಮುಖ್ಯಮಂತ್ರಿಗಳಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರೂ ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಸಿಎಂ ನಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾವು ನಡೆಯುತ್ತೇವೆ. ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಅನಗತ್ಯವಾಗಿ ಯಾರ ತೇಜೋವಧೆ ಮಾಡುವಂತಿಲ್ಲ” ಎಂದು ತಿಳಿಸಿದರು.

Home add -Advt

Government contemplating action against those who launched a misinformation campaign against Dharmasthala: DCM DK Shivakumar

Bengaluru, Aug 15: Deputy Chief Minister DK Shivakumar today said that the government was contemplating action against those who carried out a misinformation campaign against Dharmasthala.

Speaking to reporters at the KPCC office, he said, “It is not about for or against Dharmasthala, the process must be as per the law. I have known Dharmasthala closely and I have faith in the place. I firmly believe that the conspiracy will be exposed in the days to come. The Home minister will present the facts about this case in the House.”

Asked if there was conspiracy, he said, “The Home minister will explain it in detail. The CM is committed to being out the truth and has warned against any conspiracy to tarnish the image. Law is same for everyone, there is no attempt to protect anyone. No one’s reputation must be tarnished.”

Related Articles

Back to top button