

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ವಿಲ್ಸನ್ ಗಾರ್ಡನ್ ಬಳಿಯ ಚೆನ್ನಯ್ಯನಪಾಳ್ಯದ ಮನೆಯಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕನೊಬ್ಬ ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ಹಲವಾರು ಮನೆಗಳು ಛಿದ್ರ ಛಿದ್ರಗೊಂಡಿವೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಂದ ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೇಲ್ನೋಟಕ್ಕೆ ಸಿಲಿಂಡರ್ ಸೊಹೋಟದಿಂದ ದುರಂತ ಸಂಭವಿಸಿದಂತೆ ಭಾಸವಾಗುತ್ತಿದೆ. ಇನ್ನೂ ನಿಖರವಾಗಿ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.
ದುರಂತದಲ್ಲಿ ಓರ್ವ ಬಾಲಕ ಬಲಿಯಾಗಿದ್ದಾನೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.