Belagavi NewsBelgaum NewsKarnataka NewsLatest
*ಬ್ಯೂಟಿ ಪಾರ್ಲರ್ ಗಳಿಗೆ ಬಿಗ್ ಶಾಕ್: ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: 30 ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ವಿವಿಧ ಬ್ಯೂಟಿ ಪಾರ್ಲರ್ ಗಳಲ್ಲಿ ಕೆಮಿಕಲ್ ಮಿಶ್ರಿತ ಸೌಂದರ್ಯ ವರ್ದಕಗಳ ಬಳಕೆ, ಕೂದಲು ಕಸಿ, ಸ್ಟಿರೈಡ್ ಬಳಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಲಿಖಿತ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಎಲ್ಲಾ ಪಾರ್ಲರ್ ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸುವಂತೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಡಿಹೆಚ್ ಒ ಡಾ.ಈಶ್ವರ ಗಡಾದಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು 30 ಪಾರ್ಲರ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ಕೆಮಿಕಲ್ ವಸ್ತುಗಳನ್ನು, ಸ್ಟಿರೈಡ್ಸ್ ಗಳನ್ನು ಜಪ್ತಿ ಮಾಡಿದ್ದಾರೆ.
ಇದೇ ವೇಳೆ 10 ಪಾರ್ಲರ್ ಗಳನ್ನು ಸೀಜ್ ಮಾಡಿದ್ದು, 20 ಪಾರ್ಲರ್ ಗಳಿಗೆ ನೋಟಿಸ್ ನೀಡಿದ್ದಾರೆ.