
ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಖ್ಯಾತ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಸ್ವಪ್ನಾ ರಾವ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. 2014ರಲ್ಲಿ ಹೊಸಪೇಟೆಯಲ್ಲಿ ದೇವಸ್ಥಾನವೊಂದರಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಮುದ್ದಾದ ಮಗಳಿದ್ದಾಳೆ. ಇದೀಗ ನಟನ ಬಾಳಲ್ಲಿ ಬಿರುಕು ಮೂಡಿದೆ ಎಂದು ತಿಳಿದುಬಂದಿದೆ.
ಅಜಯ್ ರಾವ್ ಪತ್ನಿ ಸ್ವಪ್ನಾ ರಾವ್, ಇಂದು ಏಕಾಏಕಿ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಅಜಯ್ ರಾವ್ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಕೂಡ ದಾಖಲಿಸಿದ್ದಾರೆ. ಅಲ್ಲದೇ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಸ್ಯಾಂಡಲ್ ವುಡ್ ನ ಮತ್ತೋರ್ವ ನಟನ ದಾಂಪತ್ಯದಲ್ಲಿ ಬಿರುಕು ಸುದ್ದಿ, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.