Karnataka NewsLatestPolitics

*ಚಂದ್ರಶೇಖರನಾಥ ಸ್ವಾಮೀಜಿ ನಿಧನಕ್ಕೆ ಡಿಸಿಎಂ ಡಿ. ಕೆ ಶಿವಕುಮಾರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರ ನಿಧನಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

“ಪೂಜ್ಯ ಸ್ವಾಮೀಜಿಗಳ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಸಮುದಾಯದ ಬೆಳವಣಿಗೆಗೆ ಸ್ವಾಮೀಜಿಯವರು ನೀಡಿದ ಕೊಡುಗೆ ಅಪಾರ. ಶಿಕ್ಷಣದಿಂದ ಮಾತ್ರ ಸಮುದಾಯದ ಪ್ರಗತಿ ಸಾಧ್ಯ ಎಂದು ನಂಬಿದ್ದರು. ತಾವೇ ಕೃಷಿ ಮಾಡಿ ದಾಸೋಹ ಮಾಡುತ್ತಿದ್ದರು. ಅವರ ಅಗಲಿಕೆ ಇಡೀ ಸಮುದಾಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಭಕ್ತರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button