
ಪ್ರಗತಿವಾಹಿನಿ ಸುದ್ದಿ: ಸೆಪ್ಟೆಂಬರ್ 9 ಕ್ಕೆ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಚಟುವಟಿಕೆ ಆರಂಭಿಸಿದೆ. ದೇಶದಲ್ಲಿ ಮುಂದಿನ ಉಪರಾಷ್ಟ್ರಪತಿ ಯಾರಾಗ್ತಾರೆ ಎಂಬ ಕುತೂಹಲ ಇದೆ.
ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಮತ್ತು ಬಿಹಾರ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಸೇರಿದಂತೆ ಹಲವು ಸಂಭಾವ್ಯ ಅಭ್ಯರ್ಥಿಗಳೊಂದಿಗೆ ಚರ್ಚೆ ಆರಂಭವಾಗಿದೆ.
ಎನ್‌ಡಿಎ ಮೈತ್ರಿಕೂಟ ಮತ್ತು ಇಂಡಿಯಾ ಮೈತ್ರಿಕೂಟಗಳೆರಡೂ ತಮ್ಮ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಲಿವೆ. ಆದರೆ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಎನ್‌ಡಿಎ ಗೆ ಬಹುಮತ ಇರೋದರಿಂದ ಎನ್‌ಡಿಎ ಅಭ್ಯರ್ಥಿ ಗೆಲ್ಲೋದು ಪಕ್ಕಾ ಹೀಗಾಗಿ ಎನ್‌ಡಿಎನಲ್ಲಿ ಉಪರಾಷ್ಟ್ರಪತಿ ಸ್ಥಾನದ ಅಭ್ಯರ್ಥಿ ಯಾರಾಗ್ತಾರೆ ಎಂಬ ಬಗ್ಗೆ ಹೆಚ್ಚು ಕುತೂಹಲ ಇದೆ.