
ಪ್ರಗತಿವಾಹಿನಿ ಸುದ್ದಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಸ್ಪರ್ಧೆ ವೇಳೆ ಅವಘಡ ಸಂಭವಿಸಿದ್ದು ಗೋವಿಂದ ವೇಷಧಾರಿಯೊಬ್ಬರು ಮೃತಪಟ್ಟು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಶ್ರೀ ಕೃಷ್ಣ ಜನ್ಮಾಷ್ಟಮಿಯ ದಿನದ ಕಾರ್ಯಕ್ರಮದ ವೇಳೆ ಮುಂಬೈ ನಲ್ಲಿ ಭೀಕರ ದುರಂತ ಸಂಭವಿಸಿದೆ. ಎತ್ತರದಲ್ಲಿ ಕಟ್ಟಿರುವ ಮೊಸರಿನ ಕುಡಿಕೆ ಕಟ್ಟಲು ಹೋಗಿ ವ್ಯಕ್ತಿ ಮೃತಪಟ್ಟಿದ್ದಾರೆ. ಮೇಲಿಂದ ವ್ಯಕ್ತಿಗೆ ವ್ಯಕ್ತಿ ಕೆಳಗೆ ಬೀಳುತ್ತಿದಂತೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತಕ್ಕೀಡಾಗಿದ್ದಾರೆ. ಘಟನೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಯಕ್ರಮ ಆಯೋಜಕರನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.