Kannada NewsKarnataka NewsLatest

*ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತ: ಇಬ್ಬರು ಪ್ರಯಾಣಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತಕ್ಕೀಡಾಗಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದಿದೆ.

ಇಲ್ಲಿನ ಬೈರಾಪುರ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಮಂಡ್ಯ ಮೂಲದ ಶ್ವೇತಾ (38), ಬಾಲನಾಯಕ (42) ಮೃತ ದುರ್ದೈವಿಗಳು. ಬಸ್ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು ಈ ವೇಳೆ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಿರಗುಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button