Latest

ದೆಹಲಿ ಬೆಂಕಿ ಅವಘಡ ಭಯಾನಕ : ಪ್ರಧಾನಿ ನರೇಂದ್ರ ಮೋದಿ

ಪ್ರಗತಿವಾಹಿನಿ ಸುದ್ದಿ, ದೆಹಲಿ 

  • ದೆಹಲಿ ಬೆಂಕಿ ಅವಘಡದ ಬಗ್ಗೆ ಮೋದಿ ಟ್ವೀಟ್
  • ಸಂತ್ರಸ್ತರಿಗೆ ಸಹಾಯ ಬೇಕು : ಸೋನಿಯಾ ಗಾಂಧಿ ಒತ್ತಾಯ
  • ಈ ಘಟನೆಯು ತೀವ್ರವಾಗಿ ನೋವುಂಟು ಮಾಡಿದೆ : ರಾಹುಲ್ ಗಾಂಧಿ

ನವದೆಹಲಿ : ದೆಹಲಿಯ ಅನಾಜ್ ಮಂಡಿ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಅವಘಡ ಅತ್ಯಂತ ಭಯಾನಕ ಘಟನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಹಲವರು ಜೀವ ಕಳೆದುಕೊಂಡು ಹಲವರು ಗಂಭೀರ ಗಾಯಗೊಂಡಿದ್ದಾರೆ. ಘಟನೆಯು ಆತಂಕ ಸೃಷ್ಟಿಸಿದೆ ಎಂದು ಅವರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.

ಘಟನೆ ಕುರಿತು ಅಧಿಕಾರಿಗಳು ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಭೀಕರ ಘಟನೆಯ ಆಧಾರದ ಮೇಲೆ ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡುವಂತೆ ಅಮಿತ್ ಶಾ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಸಂತ್ರಸ್ತರಿಗೆ ಮತ್ತು ಮೃತರ ಕುಟುಂಬಗಳಿಗೆ ಎಲ್ಲಾ ನೆರವು ನೀಡುವಂತೆ ಸೋನಿಯಾ ಗಾಂಧಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಈ ಘಟನೆ ತನಗೆ ಗಂಭೀರವಾಗಿ ನೋವುಂಟು ಮಾಡಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Home add -Advt

Related Articles

Back to top button