*ಹಬ್ಬಾನಟ್ಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: 1.50 ಲಕ್ಷ ರೂ. ಅನುದಾನ ಒದಗಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*


ಪ್ರಗತಿವಾಹಿನಿ ಸುದ್ದಿ, ಖಾನಾಪುರ : ಖಾನಾಪುರ ತಾಲೂಕಿನ ಹಬ್ಬಾನಹಟ್ಟಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿರುವ ಶ್ರೀ ಸ್ವಯಂಭೂ ಮಾರುತಿ ಮಲಪ್ರಭಾ ತೀರ್ಥಕ್ಷೇತ್ರದಲ್ಲಿ ಸುಮಾರು ಒಂದೂವರೆ ಕೋಟಿ (1.50 ಕೋಟಿ) ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶ್ರಾವಣ ಸೋಮವಾರ ಚಾಲನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ದೇವಸ್ಥಾನದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಹಣ ಬಿಡುಗಡೆ ಮಾಡಿಸಿದ್ದಾರೆ. ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೂ ನಿರಂತರ ಅಭಿವೃದ್ಧಿಯ ಕ್ರಾಂತಿ ನಡೆಸುತ್ತಿರುವ ಲಕ್ಷ್ಮೀ ಹೆಬ್ಬಾಳಕರ್, 140ಕ್ಕೂ ಹೆಚ್ಚು ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿಸಿದ್ದಾರೆ. ಇದೀಗ ಖಾನಾಪುರ ತಾಲೂಕಿನ ದೇವಸ್ಥಾನಕ್ಕೂ 1.50 ಕೋಟಿ ರೂ ಒದಗಿಸಿದ್ದಾರೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಂತೆ ಖಾನಾಪುರ ತಾಲೂಕಿನ ಬಗೆಗೂ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬಕ್ಕೆ ವಿಶೇಷ ಖಾಳಜಿ ಇದ್ದು, ಈಗಾಗಲೆ ತಾಲೂಕಿನಾದ್ಯಂತ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಹ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ವಿಠ್ಠಲರಾವ್ ಹಲಗೇಕರ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ದೇವಸ್ಥಾನ ಸಮಿತಿಯ ಅಧ್ಯಕ್ಷರಾಸ ಲಕ್ಷ್ಮಣರಾವ್ ಕಸರ್ಲೆಕರ್, ಶೇಖರಗೌಡ ಕುರದಗಿ, ಕಿರಣ ಗಾವಡೆ, ಸರಸ್ವತಿ ಭರಣಕರ್, ದೇವಸ್ಥಾನ ಸಮಿತಿಯ ಸದಸ್ಯರು, ಗ್ರಾಮದ ಪಂಚ ಕಮೀಟಿ ಉಪಸ್ಥಿತರಿದ್ದರು.