
ಪ್ರಗತಿವಾಹಿನಿ ಸುದ್ದಿ: ಬೈಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಅಣ್ಣ-ತಂಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ವೀರಾಪುರದಲ್ಲಿ ಈ ಘಟನೆ ನಡೆದಿದೆ. ಯಶಸ್ವಿನಿಬಾಯಿ, ಸಹೋದರ ಹರ್ಶಿಕ್ ಮೃತ ದುರ್ದೈವಿಗಳು. ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಕೋಲಾರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.