Belagavi NewsBelgaum NewsCrimeLatest

*ಬಿಮ್ಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೋ ರೋಗ ವಿಭಾಗದಲ್ಲಿ ವಿಧ್ಯಾಭಾಸ ಮಾಡುತ್ತಿದ್ದ ಬೆಳಗಾವಿಯ ಬಿಮ್ಸ್ ಕಾಲೇಜಿನ ವಿದ್ಯಾರ್ಥಿ  ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 

ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ಕುರಿತು ಅಧ್ಯಯನ ಮಾಡಿದ್ದ ಪ್ರಿಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೆಲ ದಿನಗಳ ಹಿಂದೆಯೂ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 

ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಪ್ರಿಯಾ ಮಾನಸಿಕ ರೋಗದಿಂದ ಬಳಲುತ್ತಿದ್ದಳು. ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿತ್ತು. ಆಕೆ ಅಧಿಕ ಪ್ರಮಾಣದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದು ಬರಲಿದೆ ಎಂದು ಎಂದು ತಿಳಿಸಿದರು. 

Home add -Advt

ಎಪಿಎಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button