
ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಕರ್ತವ್ಯ ಲೋಪ ಕುರುತು ವರದಿ ಸಲ್ಲಿಸಲು ತನಿಖಾ ತಂಡ ರಚಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ನಿರ್ದೇಶಕರು, ಮಂಡ್ಯದ ಹೆಚ್ಚುವರಿ ಜಿಲ್ಲಾಧಿಕಾರಿ, ಬೆಂಗಳೂರು ಕೇಂದ್ರ ಕಚೇರಿಯ ಉಪ ಔಷಧ ನಿಯಂತ್ರಕರು ಮತ್ತು ಆರೋಗ್ಯ ಇಲಾಖೆಯ ಉಪನಿರ್ದೇಶಕರ ತಂಡವನ್ನು ರಚಿಸಲಾಗಿದೆ.
ಮಂಡ್ಯ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ ಪಿ ವರದಿಯಲ್ಲಿನ ಅಂಶಗಳ ಕುರಿತು ತನಿಖಾ ತಂಡ 10 ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.