Kannada NewsKarnataka NewsPolitics

*ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ಎಂದಿದ್ದ ಯತ್ನಾಳಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿ ಮಾಡಬಾರದಾ ? ಅವರನ್ನು ಮದುವೆ ಆಗಬಾರದೆಂದು ಎಲ್ಲಿದೆ ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂಪಾಯಿ ಕೊಡುತ್ತೇವೆ ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದು ಹೇಳಿದ್ದ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. 

ಕೊಪ್ಪಳದ ಗವಿಸಿದ್ದಪ್ಪ ಕೊಲೆ ಪ್ರಕರಣ ಸಂಬಂಧ ಆಗಸ್ಟ್ 10 ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ರು. ಇದೇ ಕಾರಣಕ್ಕೆ ಮುಸ್ಲಿಂ ಮುಖಂಡರು ಯತ್ನಾಳ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಬೆಂಗಳೂರು ಮೂಲದ ಅಬ್ದುಲ್ ರಜಾಕ್ ಖಾನ್ ಅನ್ನೋರು ಕೊಪ್ಪಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾಂಗ್ರೆಸ್ ಸರಕಾರದಲ್ಲಿ ಮುಸ್ಲಿಂರಿಗೆ ನ್ಯಾಯ ಸಿಗುವುದಿಲ್ಲ. ಪ್ರಕರಣ ದಾಖಲಿಸಿಕೊಂಡ ನಂತರವೇ ನಾನು ಇಲ್ಲಿಂದ ಹೋಗೋದು ಎಂದು ದೂರುದಾರ ಅಬ್ದುಲ್ ರಜಾಕ್ ಪಟ್ಟು ಹಿಡಿದಿದ್ದರು. 

ಅಲ್ಲದೇ, ಬಸನಗೌಡ ಯತ್ನಾಳ್, ಯಡಿಯೂರಪ್ಪ ಹಾಗು ವಿಜಯೇಂದ್ರರನ್ನೇ ಬಿಟ್ಟಿಲ್ಲ. ಇದೇ ಕಾರಣಕ್ಕೆ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾರೆ. ಅವರು ಪ್ರವಾದಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಆದರೆ, ಯತ್ನಾಳ್ ಹೇಳಿಕೆ ನೀಡಿ 10 ದಿನವಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಅಬ್ದುಲ್ ರಜಾಕ್ ಕಿಡಿಕಾರಿದ್ದಾರೆ.

Home add -Advt

Related Articles

Back to top button