*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ವೇಳೆ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಮುಖ್ಯಮಮಂತ್ರಿ ಸಿದ್ದರಾಮ್ಯಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯಸಭ ಅಸದಸ್ಯ ಚಂದ್ರಶೇಖರ್ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಸಭಾ ಸದಸ್ಯ ಚಂದ್ರಶೇಖರ್ ವಿರುದ್ಧ ಆಡಿಯೋ ಕ್ಲಿಪ್ , ದಾಖಲೆಗಳ ಸಮೇತ ದೂರು ನೀಡಲಾಗಿದೆ. ಅಲ್ಲದೇ ಹಾಸನ ಸಂಸದ ಶ್ರೇಯಸ್ ಪಟೇಲ್ ವಿರುದ್ಧವೂ ದೂರು ನೀಡಲಾಗಿದೆ.
2024ಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ವಿಚಾರವಾಗಿ ಶಾಸಕ ಶಿವರಾಮೇಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಪ್ರಕರಣ ಸಂಬಂಧ ಇದೀಗ ದೇವರಾಜೇಗೌಡ ಸಿಎಂ , ಡಿಸಿಎಂ, ಹಾಸನ ಸಂಸದ ಸೇರಿದಂತೆ ಹಲವರ ವಿರುದ್ಧ ದೂರು ನೀಡಿದ್ದಾರೆ.
ಆಡಿಯೋ ವೈರಲ್ ಆದ ಬೆನ್ನಲ್ಲೇ ನಾನು ಸಿಬಿಐಗೆ ದೂರು ನೀಡಿದ್ದೆ. ಸಿಬಿಐ ಚುನಾವಣಾ ಆಯೋಗಕ್ಕೆ ದೂರು ವರ್ಗಾವಣೆ ಮಾಡಿದೆ. ಮಾಹಿತಿ ನೀಡುವಂತೆ ಆಯೋಗ ನನಗೆ ಇ-ಮೇಲ್ ಕಳುಹಿಸಿತ್ತು. ಈ ಹಿನ್ನೆಲೆಯಲ್ಲಿ ನಾನು ಖುದ್ದು ದೆಹಲಿಗೆ ಆಗಮಿಸಿ ದಾಖಲೆಗಳನ್ನು ನೀಡಿದ್ದೇನೆ ಎಂದು ದೇವರಾಜೆಗೌಡ ತಿಳಿಸಿದ್ದಾರೆ.