
ಪ್ರಗತಿವಾಹಿನಿ ಸುದ್ದಿ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2003ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದರು. ಧರ್ಮಸ್ಥಳದ ಪ್ರಕರಣದ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಅನನ್ಯಾ ಭಟ್ ನಾಪತ್ತೆ ಪ್ರಕರಣ ಮತ್ತೆ ಸುದ್ದಿಯಾಗಿದ್ದು, ಎಸ್ ಐಟಿ ತನಿಖೆಗೆ ಹಸ್ತಾಂತರಿಸಲಾಗಿದೆ.
ಡಿಜಿ & ಐಜಿಪಿ ಆದೇಶದ ಮೇರೆಗೆ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ಹಸ್ತಾಂತರ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ.