Belagavi NewsBelgaum NewsKannada NewsKarnataka NewsPolitics

*ಮೇಲ್ಮನೆಯಲ್ಲೂ ಬಾಲ್ಯವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್: ವಿಧಾನ ಪರಿಷತ್‌ನಲ್ಲಿ ಕಾಯ್ದೆಗಳನ್ನು ಮಂಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ವಿಧಾನ ಪರಿಷತ್‌ನಲ್ಲೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಇದರೊಂದಿಗೆ ಸಾಮಾಜಿಕ ಪೀಡುಗಾಗಿರುವ ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ನಿಷೇಧಕ್ಕೆ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಂತಾಗಿದೆ. 

ಮುಂಗಾರು ಅಧಿವೇಶನದ ‌7ನೇ ದಿನವಾದ ಬುಧವಾರ ವಿಧಾನ ಪರಿಷತ್‌ನಲ್ಲಿ ಈ ಎರಡೂ ಕಾಯ್ದೆಗಳ ಬಗ್ಗೆ ಪಕ್ಷಾತೀತವಾಗಿ ಚರ್ಚೆ ನಡೆಸಲಾಯಿತು. 

ಕರ್ನಾಟಕದಲ್ಲಿ ಬಾಲ್ಯವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ಇದುವರೆಗೂ ಸಂಪೂರ್ಣ ತಡೆ ಸಾಧ್ಯವಾಗಿಲ್ಲ. ಬಾಲ್ಯವಿವಾಹವನ್ನು ಬೇರು ಸಮೇತ ಕಿತ್ತೊಗೆಯಬೇಕು. 

ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಲ್ಯ ವಿವಾಹ  ನಿಷೇಧ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಹೊಸ ಕಾಯ್ದೆ ನಿಯಮ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆ ನೀಡಲಾಗುವುದು. ಜೊತೆಗೆ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳಿಗೆ 25 ಸಾವಿರ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವರು ಮಾಹಿತಿ ನೀಡಿದರು. 

Home add -Advt

ಬಳಿಕ ಕರ್ನಾಟಕ ದೇವದಾಸಿ ಪದ್ಧತಿ ಕಾಯ್ದೆಯನ್ನು ಅಂಗೀಕರಿಸಲಾಯಿತು. ದೇವದಾಸಿ ಪದದ ನಿರ್ದಿಷ್ಟ ವ್ಯಾಖ್ಯಾನವನ್ನು ಈ ಕಾಯ್ದೆಯಲ್ಲಿ ಮಾಡಲಾಗಿದ್ದು, ಇದರಿಂದ ನೈಜ ಫಲಾನುಭವಿಯನ್ನು ಗುರುತಿಸಲು ಹಾಗೂ ಅವರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಉನ್ನತಿಗೆ ನೆರವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾಹಿತಿ ನೀಡಿದರು. 

ಕಾಂಗ್ರೆಸ್‌ನ ಉಮಾಶ್ರೀ, ಶ್ರೀನಿವಾಸ್, ಬಿಜೆಪಿ ಸದಸ್ಯರಾದ ಹೇಮಲತಾ ನಾಯಕ್‌, ಭಾರತಿ ಶೆಟ್ಟಿ, ಪಿ.ಎಚ್‌.ಪೂಜಾರ್‌, ಜೆಡಿಎಸ್‌ನ ಶರವಣ,  ಈ ಎರಡು ಕಾಯ್ದೆಗಳ ಕುರಿತು ಮಾತನಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

Related Articles

Back to top button