Kannada NewsKarnataka NewsLatest

*ಪಿಒಪಿ ಗಣೇಶ ಮೂರ್ತಿ ತಯಾರಿ, ಮಾರಾಟ ಮಾಡಿದರೆ ಬೀಳುತ್ತೆ ಕ್ರಿಮಿನಲ್ ಕೇಸ್*

ಬೆಂಗಳೂರು: ಗೌರಿ-ಗಣೇಶ ಚತುರ್ಥಿಗೆ ಕ್ಷಣಗಣನೆ ಆರಂಭವಾಗಿದೆ. ಎಲ್ಲೆಲ್ಲೂ ಗಣೇಶ ಮೂರ್ತಿಗಳ ತಯಾರಿ ಬರದಿಂದ ಸಾಗಿದೆ. ಈ ನಡುವೆ ಬಿಬಿಎಂಪಿ ಗಣೇಶ ಮೂರ್ತಿ ತಯಾರಕರಿಗೆ ಖಡಕ್ ಎಚ್ಚರಿಕೆ ನೀಡಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ.

ಪರಿಸರಸ್ನೇಹಿ ಗಣೇಶ ಚತುರ್ಥಿ ಆಚರಣೆ ಮಾಡಬೇಕು. ಈ ನಿಟ್ಟಿನಲ್ಲಿ ಪಿಒಪಿ ಗಣ್ರ‍ೇಶ ಮೂರ್ತಿಗಳನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಮಾರ್ಗಸೂಚಿ ಪ್ರಕಟಿಸಿದೆ.

ಪಿಒಪಿ ಮೂರ್ತಿಗಳನ್ನು ತಯಾರಿಸುವವರ ಹಾಗೂ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ.

Home add -Advt

ಬಿಬಿಎಂಪಿ ಉಪವಿಭಾಗಗಳ ನೋಡಲ್ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಮತ್ತು ಬೆಸ್ಕಾಂ ಇಲಾಖೆ ಅಧಿಕಾರಿಗಳು ಗೌರಿ- ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟದ ಮೇಲೆ ನಿಗಾ ವಹಿಸಲಿದ್ದಾರೆ.

ಗಣೇಶಚತುರ್ಥಿ ಪರಿಸರಸ್ನೇಹಿ ಆಚರಣೆ ದೃಷ್ಟಿಯಿಂದ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ.

ಗಣೇಶ ಮೂರ್ತಿ ತಯಾರಿಕೆಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪಿಒಪಿ, ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಅವುಗಳನ್ನು ನಿಯಮಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ.

ನೈಸರ್ಗಿಕವಾದ ಜೇಡಿಮಣ್ಣಿನಿಂದ ತಯಾರಿಸಿಸ್ದ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ತಯಾರಿಸಬೇಕು

ಗಣೇಶಮೂರ್ತಿ ಪ್ರತಿಷ್ಠಾಪಿಸಲು ಅನುಮತಿಗಾಗಿ ಉಪವಿಭಾಗೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಳ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬೇಕು. ಅಧಿಕಾರಿಗಳು ಏಕಗವಾಕ್ಷಿ ವ್ಯವಸ್ಥೆ ಮೂಲಕ ತ್ವರಿತವಾಗಿ ಅನುಮತಿ ನೀಡಬೇಕು.

ನಾಗರಿಕರು ಸಣ್ಣ ಪರಿಸರಸ್ನೇಹಿ ವಿಗ್ರಹಗಳನ್ನು ಮನೆಯಲ್ಲಿಯೇ ಬಕೆಟ್ ಗಳಲ್ಲಿ ಮುಳುಗಿಸಿ ನಂತರ ಜೇಡಿಮಣ್ಣನ್ನು ಗಾರ್ಡನಿಂಗ್ ಗಾಗಿ ಮರುಬಳಕೆಮಾಡಬಹುದು

ಸಾರ್ವಜನಿಕ ಗಣೇಶಮೂರ್ತಿ ವಿಸರ್ಜನೆಗಾಗಿ ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲಿ ಸ್ಥಳಗಳನ್ನು ಗೊತ್ತುಪಡಿಸುತ್ತದೆ. ವಾರ್ಡ್ ಮಿತಿಯಲ್ಲಿ ಸಂಚಾರಿ ವಿಸರ್ಜನಾ ಘಟಕಗಳನ್ನು ಸಹ ನಿಯೋಜಿಸಲಾಗುವುದು.


Related Articles

Back to top button