Kannada NewsLatestNational

*ಐದೇ ನಿಮಿಷದಲ್ಲಿ ಆಟೋ-ಪಡೆಯಿರಿ 50 ರೂ. ಆಫರ್‌ ನೀಡಿ ವಂಚನೆ; ರಾಪಿಡೋಗೆ 10 ಲಕ್ಷ ದಂಡ*

ಪ್ರಗತಿವಾಹಿನಿ ಸುದ್ದಿ: ಐದೇ ನಿಮಿಷದಲ್ಲಿ ಆಟೋ ಅಥವಾ ಪಡೆಯಿರಿ ₹50ʼ ಹೀಗೆ ಆಫರ್ ನೀಡಿ ಗ್ರಾಹಕರನ್ನು ವಂಚಿಸುತ್ತಿದ್ದ ʼರಾಪಿಡೋʼ ಸಂಸ್ಥೆಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(CCPA) ಬರೋಬ್ಬರಿ ₹10 ಲಕ್ಷ ದಂಡ ವಿಧಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ. ಇಂಥ ಮೋಸದ ಜಾಹೀರಾತು ನೀಡುವಂಥ ಸಂಸ್ಥೆಗಳಿಗೆ ಈ ಮೂಲಕ ಸೂಚ್ಯ ಎಚ್ಚರಿಕೆ ನೀಡಿದೆ.

ಸದಾ ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸುತ್ತಿದ್ದ ಕಾರಣಕ್ಕೆ ರಾಪಿಡೋ ಸಂಸ್ಥೆ ವಿರುದ್ಧ ಅತ್ಯಧಿಕ ದೂರುಗಳು ಬಂದಿದ್ದರಿಂದ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ ಜೋಶಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದರು. ಅದರಂತೆ ಕಾರ್ಯಾಚರಣೆಗಿಳಿದ CCPA ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದು, ತಕ್ಷಣದಿಂದಲೇ ಇಂಥ ದಾರಿ ತಪ್ಪಿಸುವ ಜಾಹೀರಾತುಗಳನ್ನು ನಿಲ್ಲಿಸುವಂತೆ ಆದೇಶ ಸಹ ನೀಡಿದೆ.

ಗ್ರಾಹಕರ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದಿರುವ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA), ಜನರ ದಾರಿ ತಪ್ಪಿಸುವ ಜಾಹೀರಾತು ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿ ಅನುಸರಿಸುತ್ತಿದ್ದ ಕಾರಣಕ್ಕೆ ರಾಪಿಡೋ ಟ್ರಾನ್ಸ್‌ಪೊರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ಗೆ ₹10 ಲಕ್ಷ ದಂಡ ವಿಧಿಸಿದೆ.

ಮೋಸದ ಜಾಹೀರಾತು ನಿಲ್ಲಿಸಲು ರಾಪಿಡೋಗೆ ಸ್ಪಷ್ಟ ನಿರ್ದೇಶನ

Home add -Advt

 ʼ5 ನಿಮಿಷದಲ್ಲಿ ಆಟೋ ಸೇವೆ ಅಥವಾ ₹50 ಪಡೆಯಿರಿʼ ಹಾಗೂ ʼಗ್ಯಾರಂಟಿ ಆಟೋʼ ಎಂದೆಲ್ಲಾ ಭರವಸೆ ನೀಡುತ್ತಿದ್ದ Rapido ಜಾಹೀರಾತು ಮತ್ತು ಸಂಬಂಧಿತ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ CCPA ಇದೊಂದು ಮೋಸದ ಜಾಹೀರಾತು ಎಂಬುದನ್ನು ಖಚಿತಪಡಿಸಿಕೊಂಡಿದೆ. ಈ ಜಾಹೀರಾತು ವಂಚನೆಯಿಂದ ಕೂಡಿದ್ದು, ಜನರ ದಾರಿ ತಪ್ಪಿಸುವುದಾಗಿದೆ. ಅಲ್ಲದೇ, ಗ್ರಾಹಕರನ್ನು ಮೋಸಗೊಳಿಸುವುದಾಗಿದೆ. ಹಾಗಾಗಿ ತಕ್ಷಣವೇ ಇದನ್ನು ನಿಲ್ಲಿಸುವಂತೆ ರಾಪಿಡೋಗೆ ಸ್ಪಷ್ಟ ನಿರ್ದೇಶನ ನೀಡಿದೆ.

ಗ್ರಾಹಕರಿಂದ 1799 ದೂರುಗಳು:

ʼ5 ನಿಮಿಷದಲ್ಲಿ ಆಟೋ ಸೇವೆ ಅಥವಾ ₹50 ಪಡೆಯಿರಿʼ ಎಂಬ ರಾಪಿಡೋ ಸಂಸ್ಥೆಯ ಮೋಸದ ಜಾಹೀರಾತು ವಿರುದ್ಧ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಮೂಲಕ ಅತ್ಯಧಿಕ ದೂರುಗಳು ದಾಖಲಾಗಿವೆ. 2023ರ ಏಪ್ರಿಲ್‌ನಿಂದ 2024ರ ಮೇ ವರೆಗೆ 575 ದೂರುಗಳು ಬಂದಿವೆ. 2024 ಜೂನ್‌ನಿಂದ 2025ರ ಜುಲೈ ವರೆಗೆ ಹಿಂದಿನಕ್ಕಿಂತ ದುಪ್ಟಟ್ಟು ಅಂದರೆ 1,224 ದೂರುಗಳು ಬಂದಿವೆ. ಹೀಗಾಗಿ ಸಚಿವ ಪ್ರಲ್ಹಾದ ಜೋಶಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದರು.

CCPA ತನಿಖೆ ವೇಳೆ Rapido ಜಾಹೀರಾತುಗಳಲ್ಲಿ ʼT&C ಅನ್ವಯ ಎಂಬುದು ಓದಲಾಗದಂಥ ಅತ್ಯಂತ ಚಿಕ್ಕ ಗಾತ್ರದ ಅಕ್ಷರದಲ್ಲಿ ಪ್ರದರ್ಶಿಸಲ್ಪಟ್ಟಿತ್ತು. ಅಲ್ಲದೇ, ಭರವಸೆ ನೀಡಿದಂತೆ ₹50 ಮೊತ್ತವೂ ಸಿಗುತ್ತಿರಲಿಲ್ಲ. ಬದಲಿಗೆ ʼRapido ನಾಣ್ಯಗಳುʼ ರೂಪದಲ್ಲಿ ಅದೂ ಕೇವಲ 7 ದಿನಗಳ ಮಾನ್ಯತೆ ಹೊಂದಿತ್ತು. ಇದಲ್ಲದೆ, ಈ ಆಫರ್‌ ಅನ್ನು ʼವೈಯಕ್ತಿಕ ಕ್ಯಾಪ್ಟನ್‌ಗಳು ನೀಡುತ್ತಿದ್ದಾರೆಯೇ ಹೊರತು ರಾಪಿಡೋʼ ಅಲ್ಲ ಎಂದು ಹೇಳಿ ಕಂಪನಿ ಹೊಣೆಗಾರಿಕೆಯಿಂದ ಜಾರಿಕೊಳ್ಳತೊಡಗಿತ್ತು. 

Rapido ವಿರುದ್ಧ ಗ್ರಾಹಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ದೂರುಗಳು ಬರುತ್ತಲೇ ಇದ್ದವು. ಸೇವಾ ನ್ಯೂನತೆ, ಪಾವತಿಸಿದ ಮೊತ್ತ ಮರುಪಾವತಿ ಮಾಡದೇ ಇರುವುದು, ಅಧಿಕ ಶುಲ್ಕ ವಿಧಿಸುವುದು, ಭರವಸೆ ನೀಡಿದಂತೆ ಸೇವೆ ಒದಗಿಸುವಲ್ಲಿ ವಿಫಲ ಹಾಗೂ ಖಾತರಿಪಡಿಸಿದ ʼ5 ನಿಮಿಷʼ ಸೇವೆ ಪೂರೈಸದಿರುವ ಬಗ್ಗೆ ದೂರುಗಳು ವ್ಯಾಪಕವಾಗಿದ್ದವು. ಈ ಬಗ್ಗೆ ಸಂಸ್ಥೆಯ ಗಮನ ಸೆಳೆದರೂ ಪರಿಹರಿಸದೆ ಕಡೆಗಣಿಸಿತ್ತು ರಾಪಿಡೋ.

ದೊಡ್ಡ ದೊಡ್ಡ ಭರವಸೆ ನೀಡುವ ಅಥವಾ ಷರತ್ತುಗಳನ್ನು ವಿವರಿಸದೆ ʼಖಾತರಿʼ ಅಥವಾ ʼಖಚಿತʼದಂತಹ ನುಡಿಗಟ್ಟು ಬಳಸುವ ಜಾಹೀರಾತುಗಳ ಬಗ್ಗೆ ಗ್ರಾಹಕರು ಜಾಗರೂಕರಾಗಿರಬೇಕು ಎಂದು CCPA ಸಲಹೆ ನೀಡಿದೆ. ಅಲ್ಲದೇ, ಇಂಥ ದಾರಿ ತಪ್ಪಿಸುವ ಜಾಹೀರಾತು, ಅನ್ಯಾಯದ ವ್ಯಾಪಾರ ಪದ್ಧತಿಗಳಿಂದ ಸಮಸ್ಯೆ ಎದುರಿಸಿದರೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ʼ1915ʼ ಕರೆ ಮಾಡಿ ದೂರು ಸಲ್ಲಿಸಲು ಅಥವಾ NCH ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ದೂರು ಸಲ್ಲಿಸುವಂತೆ ತಿಳಿಸಿದೆ.

ರಾಪಿಡೋ ಖಾಸಗಿ ಸಾರಿಗೆ ಸಂಸ್ಥೆ ದೇಶದ 120ಕ್ಕೂ ಹೆಚ್ಚು ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ʼಐದೇ ನಿಮಿಷದಲ್ಲಿ ಆಟೋ ಅಥವಾ ಪಡೆಯಿರಿ ₹50ʼ  ಆಫರ್ ನೀಡಿ ಗ್ರಾಹಕರನ್ನು ಮೋಸಗೊಳಿಸುತ್ತಿತ್ತು. ದೇಶಾದ್ಯಂತ ಆಯಾ ಪ್ರಾದೇಶಿಕ ಭಾಷೆಗಳಲ್ಲೇ 18 ತಿಂಗಳಿಂದ ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಬಿತ್ತರಿಸುತ್ತಿದೆ. ಆದರೆ, ತಕ್ಕಂತೆ ಸೇವೆ ಒದಗಿಸಿಲ್ಲ. ಈ ಬಗ್ಗೆ ಗ್ರಾಹಕ ಇಲಾಖೆಗೆ ಅತ್ಯಧಿಕ ದೂರುಗಳು ಬಂದಿದ್ದವು. ಇದರ ಜಾಡು ಹಿಡಿದು ಪರಿಶೀಲಿಸಲು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ ಸೂಚಿಸಿದ್ದೆ. ಅದರಂತೆ CCPA ಪರಿಶೀಲನೆ ನಡೆಸಿ ರಾಪಿಡೋಗೆ ಇಷ್ಟೊಂದು ದೊಡ್ಡ (₹10 ಲಕ್ಷ) ಮೊತ್ತದ ದಂಡ ವಿಧಿಸಿದೆ.

Related Articles

Back to top button