Belagavi NewsBelgaum NewsKannada NewsKarnataka NewsLatestNationalPolitics
*ಬೆಳಗಾವಿಗೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳಾ ಇಂದು ಬೆಳಗಾವಿ ಜಿಲ್ಲೆಯ ಭಿಮ್ಸ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಭೇಟಿ ನೀಡಿದರು.
ಬೆಳಗಾವಿಯ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು, ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ದತ್ತು ಕೇಂದ್ರ, ಶಿಶು ಪಾಲನಾ ಕೇಂದ್ರ ಹಾಗೂ ಅಶೋಕ್ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲೆಯ ಪ್ರಸ್ತುತ ಮಕ್ಕಳ ಸ್ಥಿತಿಗತಿಗಳ ಕುರಿತು ಚರ್ಚಿಸಿದರು.