
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮುದ್ದಿಪಾಳ್ಯ ರಸ್ತೆಯಲ್ಲಿರುವ ಕುಸುಮಾ ಅವರ ನಿವಾಸದ ಮೇಲೆ ಇಂದು ಮುಂಜಾನೆ 4:30ರ ಸುಮಾರಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶಲನೆ ನಡೆಸಿದ್ದಾರೆ.
ಕುಸುಮಾ ಸಹೋದರನ ಜೊತೆ ವಿರೇಂದ್ರ ಪಪ್ಪಿ ವ್ಯವಹಾರ ಹೊಂದಿರುವ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಕುಸುಮಾ ಹನುಮಂತರಾಯಪ್ಪ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ.