
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್ 23 ರಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.
ಬೆಳಿಗ್ಗೆ 11 ಗಂಟೆಗೆ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾದರೂ, ಹೆಚ್ಚುವರಿ ಸಮಯದ ಅವಶ್ಯಕತೆ ಇರುವುದಾಗಿ ವಾದಿಗಳ ಪರದಿಂದ ಮನವಿ ಸಲ್ಲಿಸಲಾಯಿತು. ಇದನ್ನು ಗಮನಿಸಿದ ನ್ಯಾಯಾಲಯ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ತಿಮರೋಡಿ ಜಾಮೀನು ವಿಚಾರಣೆ ಕುರಿತು ಉಡುಪಿಯಲ್ಲಿ ರಾಜಕೀಯ ವಲಯ ಸೇರಿದಂತೆ ಹಲವಾರು ವಲಯಗಳಲ್ಲಿ ಕುತೂಹಲ ಹೆಚ್ಚಾಗಿದೆ.