Belagavi NewsBelgaum NewsKannada NewsKarnataka News
*ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಬಟಕುರ್ಕಿ ಗ್ರಾಮದಲ್ಲಿ ರಸ್ತೆ ಡಿವೈಡರಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ರವಿ ನಿಂಗಪ್ಪ ಬೂದಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೈಕ್ ಹಿಂಬದಿ ಸವಾರಿನ ತಲೆಗೆ ಪೆಟ್ಟಾಗಿದ್ದು ರಾಮದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಪಿಎಸ್‌ಐ ಸವಿತಾ ಮುನ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.