Kannada NewsKarnataka NewsLatest

*ASI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣದ ಎಂ.ಕೆ.ದೊಡ್ಡಿ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ನಾಗರಾಜು, ಕಾನ್ ಸ್ಟೇಬಲ್ ಗಳಾದ ಲಕ್ಷ್ಮೀನಾರಾಯಣ, ಪ್ರತಾಪ್, ಸೋಮನಾಥ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ತವ್ಯಲೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

ಕಳ್ಳತನ ಕೇಸ್ ನಲ್ಲಿ ಬಂಧಿತನಾಗಿದ್ದ ಆರೋಪಿ ರಮೇಶ್ ಪೊಲೀಸ್ ಠಾಣೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತುಮಾಡಲಾಗಿದೆ.

Home add -Advt

Related Articles

Back to top button