Belagavi NewsBelgaum NewsKannada NewsKarnataka NewsPolitics

*ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದ ಲಕ್ಷ್ಮಣ ಸವದಿ*

ಪ್ರಗತಿವಾಹಿನಿ ಸುದ್ದಿ: ಅವನೊಬ್ಬ ಮೋಸಗಾರ ಎಂದು ಲಕ್ಷ್ಮಣ ಸವದಿ ವಿರುದ್ಧ ನಾಲಗೆ ಹರಿಬಿಟ್ಟಿದ್ದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ ಸವದಿ ಸಾಫ್ಟ್ ಆಗಿ ತಿವಿದಿದ್ದಾರೆ.

ಮತದಾನದ ಮೂಲಕ ನಾವು ವಿರೋಧಿಗಳಿಗೆ ಉತ್ತರ ನೀಡುತ್ತೇವೆ. ಹಿತೈಷಿಗಳು ಯಾವುದೇ ಕಾರಣಕ್ಕೂ ಪ್ರತಿಕ್ರಿಯೆ ನೀಡಬೇಡಿ. ನಾನು ಜನರ ಹಿತಾಸಕ್ತಿಗಾಗಿ ಸದಾ ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

30 ವರ್ಷಗಳಿಂದ ನಾನು ಜನರ ಸೇವೆ ಮಾಡುತ್ತಿದ್ದೇನೆ. ಜನರ ಹಿತ ಕಾಪಾಡಲು, ಅಭಿವೃದ್ಧಿಯ ಹಾದಿ ಮುಂದುವರಿಸಲು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.

ಈ ಹೇಳಿಕೆಯೊಂದಿಗೆ ಅಥಣಿಯ ರಾಜಕೀಯ ವಾತಾವರಣ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಡಿಸಿಸಿ ಬ್ಯಾಂಕ್‌ ಚುನಾವಣೆ ಸ್ಥಳೀಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಯಾವುದಕ್ಕೂ ಮತದಾರರೇ ಉತ್ತರ ನೀಡುತ್ತಾರೆ ಎಂದು ಶಾಸಕ ರಮೇಶ ಜಾರಕಿಹೊಳಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Home add -Advt

Related Articles

Back to top button