Kannada NewsLatestNational
*ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ಪೀಸ್ ಪೀಸ್ ಮಾಡಿ ಚೀಲದಲ್ಲಿ ತುಂಬಿದ ಪತಿ*

ಪ್ರಗತಿವಾಹಿನಿ ಸುದ್ದಿ: ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ ಮಹಾಶಯ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಚೀಲದಲ್ಲಿ ತುಂಬಿಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಇಲ್ಲಿನ ಮೆಡಿಪಲ್ಲಿಯ ಬೋಡಪ್ಪಲ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವಾತಿ ಅಲಿಯಾಸ್ ಜ್ಯೋತಿ (22) ಕೊಲೆಯಾದ ಮಹಿಳೆ. ಮಹೇಂದರ್ ರೆಡ್ಡಿ ಪತ್ನಿಯನ್ನೇ ಕೊಲೆಗೈದ ಪತಿ.
ಮನೆಯಲ್ಲಿ ಶಬ್ದ ಕೇಳಿ ನೆರ ಮನೆಯವರು ಬಂದು ನೋಡಿದಾಗ ಸ್ವಾತಿಯ ಮೃತದೇಹವನ್ನು ತಂಡು ಮಾಡು ಚೀಲದಲ್ಲಿ ತುಂಬಿಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪತಿ ಮಹೇಂದರ್ ನನ್ನು ಬಂಧಿಸಿದ್ದಾರೆ. ಯಾವ ಕಾರಣಕ್ಕಾಗಿ ಪತ್ನಿಯನ್ನು ಕೊಲೆಗೈದು ವಿಕೃತಿ ಮೆರೆದಿದ್ದಾನೆ ಎಂಬುದು ತನಿಖೆ ಬಳಿಕವೇ ಗೊತ್ತಾಗಲಿದೆ.