
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೈಲಹೊಂಗಲ ಕಡೆಯಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹಾಗೂ ಇಟ್ಟಿಗೆ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಬಸ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.