Kannada NewsLatestNational
*ಬೇಕರಿಗೆ ಬಂದಿದ್ದ ವಿದ್ಯಾರ್ಥಿನಿಗೆ ಮುತ್ತಿಟ್ಟು ಬಾಯೊಳಗೆ ಬೆರಳು ಹಾಕಿ ಕಿರುಕುಳ ನೀಡಿದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಅಜ್ಜಿ ಜೊತೆ ಬೇಕರಿಗೆ ಬಂದಿದ್ದ ಬಾಲಕಿಗೆ ಕಾಮುಕನೊಬ್ಬ ಮುತ್ತಿಟ್ಟು ಆಕೆಯ ಬಾಯೊಳಗೆ ಬೆರಳು ಹಾಕಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಬೇಕರಿಯೊಂದರಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯ ಅಸಭ್ಯ ವರ್ತನೆ ಬೇಕರಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಯನ್ನು ಬಂಧಿಸಿ ಕಠಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.
ಮೂರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಅಜ್ಜಿಯ ಜೊತೆ ಬೇಕರಿಯಲ್ಲಿ ನಿಂತಿದ್ದಳು. ಬಂದು ಬಾಲಕಿಗೆ ಕಿರುಕುಳ ನೀಡಲಾರಂಭಿಸಿದ್ದಾನೆ. ಅಲ್ಲದೇ ಬಾಲಕಿಯ ಕೆನ್ನೆಗೆ ಮುತ್ತಿಟ್ಟಿದ್ದಾನೆ. ಬಳಿಕ ಬಲವಂತವಾಗಿ ಆಕೆಯ ತುಟಿಗೆ ಮುತ್ತಿಟ್ಟು ಬಾಯಲ್ಲಿ ಬೆರಳು ಹಾಕಿದ್ದಾನೆ. ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ.
ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದಾರೆ. ಕೃತ್ಯ ನಡೆಸಿರುವ ಆರೋಪಿ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದಾರೆ.