Karnataka NewsLatestPolitics
*ಸದನದಲ್ಲಿ RSS ಗೀತೆ ಹಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಬೇಕು: ಬಿ.ಕೆ.ಹರಿಪ್ರಸಾದ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್, ಡಿ.ಕೆ,ಶಿವಕುಮಾರ್ ಅವರು ಡಿಸಿಎಂ ಆಗಿ ಆರ್ ಎಸ್ ಎಸ್ ಗೀತೆ ಹಾಡಿದ್ದರೆ ತಪ್ಪಿಲ್ಲ. ಆದರೆ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವುದರಿಂದ ಕಾಂಗ್ರೆಸ್ ಅಧ್ಯಕ್ಷನಾಗಿ ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದು ತಪ್ಪು. ಹಾಗಾಗಿ ಅವರು ಕ್ಷಮೆ ಕೇಳಬೇಕು ಎಂದರು.
ಆರ್ ಎಸ್ ಎಸ್ ನ್ನು ಮೂರು ಬಾರಿ ದೇಶದಲ್ಲಿ ನಿಷೇಧಿಸಲಾಗಿತ್ತು. ಡಿಸಿಎಂ ಆಗಿ ಅವರು ಸಂಘದ ಪ್ರಾರ್ಥನೆ ಮಾಡಿದ್ದರೆ ಅಭ್ಯಂತರವಿಲ್ಲ. ಆದರೆ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರ್ ಎಸ್ ಎಸ್ ಪ್ರಾರ್ಥನೆ ಮಾಡಿರುವುದು ತಪ್ಪು ಎಂದು ಹೇಳಿದ್ದಾರೆ.