
ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗಳು ಇಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಲಿನ ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಬೋಸ್ಲಾ ಗ್ರಾಮದ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಮೃತರು. ಮಹಾರಾಷ್ಟ್ರದಿಂದ ಸ್ವಗ್ರಾಮಕ್ಕೆ ಬೈಕ್ ನಲ್ಲಿ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ್ ಗೂಡ್ಸ್ ಡಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.