
ಪ್ರಗತಿವಾಹಿನಿ ಸುದ್ದಿ: ಗಣೇಶನ ಆಗಮನಕ್ಕೆ ಎಲ್ಲಡೆ ಭರ್ಜರಿ ತಯಾರಿ ನಡೆಸಲಾಗುತ್ತಿದ್ದು, ಹಬ್ಬದ ದಿನವೆ ಮಳೆ ಅಬ್ಬರಿಸಲಿದ್ದಾನೆ. ಆ. 27 ರಿಂದ ಮತ್ತೆ ವಿವಿಧೆಡೆ ಅಬ್ಬರಿಸಲಿದ್ದಾನೆ. ಆ. 27 ಮೂರ್ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆ ಇದೆ. ಹವಾಮಾನದಲ್ಲಿ ದಿಢೀರ್ ಬದಲಾವಣೆ, ವೈಪರೀತ್ಯ ಇದಕ್ಕೆ ಕಾರಣ ಎಂದು ಹವಾಮಾನ ಇಲಾಖೆ ಹೇಳಿದೆ.
ಬಹಳ ಪ್ರಮುಖವಾಗಿ ಬುಧವಾರದಿಂದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕನಿಷ್ಠ 150 ಮಿಲಿ ಮೀಟರ್‌ಗೂ ಹೆಚ್ಚು ಮಳೆ ನಿರೀಕ್ಷೆ ಇದೆ. ಈ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 27, 28 ರಂದು ಕಲಬುರಗಿ, ಬೀದರ್, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹಾಗೂ ಒಂದು ದಿನ ಬೆಳಗಾವಿ, ಕೊಡಗು, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆ ಪ್ರಯುಕ್ತ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳ ಹಲವೆಡೆ 48 ಗಂಟೆಗಳಲ್ಲಿ ಅಲ್ಲಲ್ಲಿ ಕನಿಷ್ಠ ಗರಿಷ್ಠ 115 ಮಿಲಿ ಮೀಟರ್‌ನಷ್ಟು ಮಳೆ ಆಗುವ ಸಂಭವವಿದೆ ಎನ್ನಲಾಗಿದೆ.
ಆಗಸ್ಟ್ 28 ರಿಂದ 30ರವರೆಗೆ ದಕ್ಷಿಣ ಕರ್ನಾಟಕದಲ್ಲಿ ಗುಡುಗು ಮತ್ತು ಮಿಂಚಿನ ಜತೆ ಭಾರಿ ಮಳೆ ಆಗಲಿದೆ. ಜೋರು ಗಾಳಿ ಬೀಸಲಿದೆ. ಒಣ ಹವೆ ಹವಾಮಾನ ಬದಲಾವಣೆಯ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.
ಆಗಸ್ಟ್ 28ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.