
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಜಗ್ಗು ಅಲಿಯಾಸ್ ಜಗದೀಶ್ ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಏರ್ ಪೋರ್ಟ್ ನಲ್ಲಿ ಆರೋಪಿ ಜಗದೀಶ್ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಜಗದೀಶ್ ದೆಹಲಿ ಏರ್ ಪೋರ್ಟ್ ನಲ್ಲಿ ಲಾಕ್ ಆಗಿದ್ದಾನೆ.
ಸದ್ಯ ಆರೋಪಿಯನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳು ವಿಚಾರಣೆಗಾಗಿ ಬೆಂಗಳೂರು ಕಚೇರಿಗೆ ಕರೆತುತ್ತಿದ್ದಾರೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಜಗದೀಶ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿತ್ತು. ಕೆಲ ವರ್ಷಗಳ ಹಿಂದೆ ಆತನನ್ನು ರೌಡಿ ಶಿಟರ್ ಪಟ್ಟಿಯಿಂದ ಕೈಬಿಡಲಾಗಿತ್ತು. ಇದೀಗ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಜಾದೀಶ್ ಪ್ರಮುಖ ಆರೋಪಿಯಾಗಿದ್ದಾನೆ.